Kannada NewsKarnataka NewsLatest
ಸಿಎಂ ಯಡಿಯೂರಪ್ಪ ಬೆಳಗಾವಿ ಪ್ರವಾಸ ಪಟ್ಟಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಳಗಾವಿ ಅಧಿಕೃತ ಪ್ರವಾಸ ಪಟ್ಟಿ ಪ್ರಕಟವಾಗಿದೆ.
ಬೆಳಗ್ಗೆ 10.15ಕ್ಕೆ ವಿಶೇಷ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ, 10.30ರಿಂದ 1.30ರ ವರೆಗೆ ಪ್ರವಾಹಪೀಡಿತ ಪ್ರದೇಶ ಮತ್ತು ಸಾಂತ್ವನ ಕೇಂದ್ರಗಳ ಪರಿಶೀಲನೆ ನಡೆಸಲಿದ್ದಾರೆ.
2.30ರಿಂದ ಜಿಲ್ಲೆಯ ಪ್ರವಾಹ ಪರಿಸ್ಥಿತಿ, ಪರಿಹಾರ ಕಾರ್ಯಾಚರಣೆಗಳ ಕುರಿತು ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ನಾಳೆ ಬೆಳಗಾವಿಗೆ ಸಿಎಂ ಯಡಿಯೂರಪ್ಪ ಭೇಟಿ

