
ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನಿಗ್ಗಿದ ಪರಿಣಾಮ ಚಾಲಕ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾಕಾರು ಮನೆಯ ಗೋಡೆಗೆ ಗುದ್ದಿದೆ. ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಾರುತಿ ಹೊಸೂರು (30) ಮೃತ ಚಾಲಕ.
ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.