Belagavi NewsBelgaum NewsKarnataka NewsPolitics
*ರಾಜ್ಯ ಸರಕಾರ, ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ: ದೆಹಲಿಯತ್ತ ಎಲ್ಲರ ದೃಷ್ಟಿ*

ಪ್ರಗತಿವಾಹಿನಿ ಸುದ್ದಿ: ವಿಪಕ್ಷಗಳ ಕೆಂಗಣ್ಣಿಗೆ ಕಾರಣವಾಗಿದ್ದ ಬೆಂಗಳೂರು ಕಾಲ್ತುಳಿತ ಪ್ರಕರಣ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಮುಜುಗರಕ್ಕೆ ಕಾರಣವಾಗಿದೆ.
ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅವರೂ ದೆಹಲಿಗೆ ತೆರಳಿದ್ದಾರೆ.
ಜೊತೆಗೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಹಲವರು ದೆಹಲಿಗೆ ತೆರಳಿದ್ದು, ತೀರ್ವ ಚರ್ಚೆಗೆ ಕಾರಣವಾಗಿದೆ.
ಸಿಎಂ ಹಾಗೂ ಡಿಸಿಎಂ ಈ ಇಬ್ಬರೂ ನಾಯಕರಿಂದ ವರಿಷ್ಠರು ಕಾಲ್ತುಳಿತದ ವರದಿಯನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ದೆಹಲಿ ಭೇಟಿ ನೀಡುವ ಸಿಎಂ ಡಿಸಿಎಂ ಅವರು, ಸಚಿವ ಸಂಪುಟ ಪುನಾರಚನೆ, ನಾಲ್ವರು ವಿಧಾನ ಪರಿಷತ್ ಸದಸ್ಯರ ನೇಮಕಾತಿ ಕುರಿತು ವರಿಷ್ಠರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಒಟ್ಟಾರೆ ದೆಹಲಿಯಲ್ಲಿನ ಬೆಳವಣಿಗೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.