ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ತನಿಖೆ ಚುರುಕುಗೊಳಿಸಲಾಗಿದೆ.
ಮಾರ್ಚ್ 1ರಂದು ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ ಘಟನೆ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಗೃಹಸಚಿವರಿಗೂ ಬಾಂಬ್ ಬೆದರಿಕೆ ಹಾಕಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಮಾದರಿಯಲ್ಲಿಯೇ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ.
2.5 ಮಿಲಿಯನ್ ಡಾಲರ್ ನೀಡಲು ಒಪ್ಪಬೇಕು ಇಲ್ಲವಾದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಲಾಗಿದೆ. ಬೆಂಗಳೂರಿನ ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸಲಾಗುವುದು ಎಂದು ಮೇಲ್ ಕಳುಹಿಸಲಾಗಿದೆ. ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ