ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು.
ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.
ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಮುಖ್ಯಮಂತ್ರಿಗಳು ಇಂದು ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರವಾಸ ಮಾಡಬೇಕಿತ್ತು. ಚನ್ನಪಟ್ಟಣದಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ