Kannada NewsKarnataka NewsNationalTravel

*ಗ್ರಾಹಕರಿಗೆ ಮತ್ತೊಂದು ಶಾಕ್: ಸಿಎನ್‌ಜಿ ದರದಲ್ಲಿ ಮತ್ತೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ವಾಹನ ಮಾಲೀಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ದೆಹಲಿಯಲ್ಲಿ ಸಂಕುಚಿತ ನೈಸರ್ಗಿಕ ಅನಿಲ (CNG) ದರದಲ್ಲಿ ಪ್ರತಿ ಕೆಜಿಗೆ 3.89 ರೂಪಾಯಿ ಹೆಚ್ಚಳ ಮಾಡಲಾಗಿದೆ. 

‌

ಈ ನೂತನ ದರ ಪರಿಷ್ಕರಣೆ ಶುಕ್ರವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದ್ದು, ದೆಹಲಿಯಲ್ಲಿ ಪ್ರಸ್ತುತ ಒಂದು ಕೆಜಿ ಸಿಎನ್‌ಜಿ ಬೆಲೆ 86.98 ರೂಪಾಯಿಗೆ ತಲುಪಿದೆ.

ದೆಹಲಿ-ಎನ್‌ಸಿಆ‌ರ್ ಭಾಗದಲ್ಲಿ ಸಿಎನ್‌ಜಿ ಪೂರೈಸುವ ಸಾರ್ವಜನಿಕ ವಲಯದ ಇಂದಿರಾಗಾಂಧಿ ಗ್ಯಾಸ್ ಲಿಮಿಟೆಡ್  ಕಂಪನಿಯು ಈ ಬೆಲೆ ಏರಿಕೆಯನ್ನು ಪ್ರಕಟಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದ್ರವೀಕೃತ ನೈಸರ್ಗಿಕ ಅನಿಲದ ಆಮದು ವೆಚ್ಚ ವಿಪರೀತ ಹೆಚ್ಚಿರುವುದೇ ಈ ಬೆಲೆ ಪರಿಷ್ಕರಣೆಗೆ ಮುಖ್ಯ ಕಾರಣ ಎಂದು ಕಂಪನಿ ತಿಳಿಸಿದೆ. 

ಹೊರದೇಶಗಳಿಂದ ಆಮದು ಮಾಡಿಕೊಳ್ಳುವ ಅನಿಲದ ವೆಚ್ಚ ಸತತವಾಗಿ ಏರುತ್ತಿರುವುದರಿಂದ, ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಅನಿವಾರ್ಯವಾಗಿ ಬೆಲೆ ಏರಿಕೆ ಮಾಡಬೇಕಾಯಿತು ಎಂದು ಕಂಪನಿ ಸ್ಪಷ್ಟನೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button