ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ಸೂಕ್ತ ಕ್ರಮ ವಹಿಸುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
2022- 23 ನೆ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರು ಇಂದು ಸಹಕಾರ ಇಲಾಖೆಯ ಪ್ರಗತಿ ಪರಿಶೀಲಿಸಿದರು.
ಸಭೆಯ ಇತರ ಮುಖ್ಯಾಂಶಗಳು:
1. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸಂಬಂಧಿಸಿದಂತೆ ಆರ್.ಬಿ.ಐ ನಿಯಮಾವಳಿಗಳ ಅಗತ್ಯಗಳಿಗೆ ಅನುಸಾರವಾಗಿ ದಾಖಲೆಗಳನ್ನು ಸಲ್ಲಿಸುವುದು. ಈ ತಿಂಗಳೊಳಗೆ ಕೆಲಸ ಪೂರ್ಣಗೊಳ್ಳಬೇಕು.
2. ಯಶಸ್ವಿನಿ ಯೋಜನೆ ಹಾಗೂ ಎ.ಬಿ.ಆರ್. ಕೆ ಡ್ಯೂಪ್ಲಿಕೇಷನ್ ಆಗಬಾರದು. ಎ.ಬಿ.ಆರ್.ಕೆ ಅರ್ಜಿಗಳನ್ನು ತಿರಸ್ಕರಿಸಕೂಡದು. ತಜ್ಞರಿಂದ ಅಧ್ಯಯನ ಕೈಗೊಂಡು ತೀರ್ಮಾನ ಕೈಗೊಳ್ಳುವುದು.
3. ಗೋಕಾಕ್, ಬೀದರ್, ಹುಬ್ಬಳ್ಳಿಯಲ್ಲಿ ಸಹಕಾರಿ ವಲಯದ ಆಸ್ಪತ್ರೆಗಳನ್ನು ಬಲಪಡಿಸಲು ಆಸ್ಪತ್ರೆಗಳಿಗೆ ನೆರವು ಒದಗಿಸಲು ಕ್ರಮ ವಹಿಸುವುದು.
4. ಸಾಲಮನ್ನಾ : 50 ವರ್ಷಗಳ ಹಳೆಯ ಸೊಸೈಟಿಗಳಿಗೆ ನೆರವು ಒದಗಿಸುವ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು.
6,500 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳ ಸೂಚನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ