ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸ್ಲೀಪರ್ ಸೆಲ್ ಗಳು ಮತ್ತೆ ಆಕ್ಟೀವ್ ಆಗಿವೆ.
ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಹೈ ಅಲರ್ಟ್ ಘೋಷಿಸಿದೆ.
ರಾಜ್ಯದ ನಾಲ್ಕು ಕಡೆಗಳಲ್ಲಿ ಕೇಂದ್ರ ಬೇಹುಗಾರಿಕಾ ಅಧಿಕಾರಿಗಳು ಸ್ಯಾಟಲೈಟ್ ಫೋನ್ ಇಂಟರ್ ಸೆಫ್ಟ್ ಮಾಡಿದ್ದವು. ಈ ವೇಳೆ ನಿಗೂಢ ವ್ಯಕ್ತಿಗಳು ಕರಾವಳಿ, ಮಲೆನಾಡು ಭಾಗದ ದಟ್ಟಾರಣ್ಯಗಳಲ್ಲಿ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ತಿಳಿದುಬಂದಿದೆ.
ಕರಾವಳಿ ಜಿಲ್ಲೆಗಳಲ್ಲಿ ಸ್ಲೀಪರ್ ಸೆಲ್ ಗಳು ಮತ್ತೆ ಆಕ್ಟೀವ್ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳ ಪ್ರಮುಖ ತಾಣಗಳಿಗೆ ಬಿಗಿ ಭದ್ರತೆ ಒದಗಿಸುವಂತೆ ಗುಪ್ತಚರ ಇಲಾಖೆ ಸೂಚಿಸಿದೆ. ಹಬ್ಬಗಳ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ನಡೆಸುವ ಬಗ್ಗೆ ಹಾಗೂ ಸಮುದ್ರಗಳ ಮಧ್ಯೆ ನಡೆಯುವ ಚಟುವಟಿಕೆಗಳ ಬಗ್ಗೆ ಎಚ್ಚರ ವಹಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದೆ ಎನ್ನಲಾಗಿದೆ.
ಮೆಗಾ ಲಸಿಕಾಮೇಳ: ದೇಶಕ್ಕೇ ಬೆಳಗಾವಿಗೆ ದ್ವಿತೀಯ ಸ್ಥಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ