Belagavi NewsBelgaum News

*ಬೆಳಗಾವಿ ಪಾಲಿಕೆಯಲ್ಲಿ ಅಧಿಕಾರಿಗಳ ನಡುವೆ ಶೀತಲ ಸಮರ: ಸತೀಶ್ ಜಾರಕಿಹೊಳಿಗೆ ದೂರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ನಡುವಿನ ಶೀತಲ ಸಮರದಿಂದ 4 ದಿನಗಳಲ್ಲಿ 40 ಅಧಿಕಾರಿಗಳ ವರ್ಗಾವಣೆ ಆಗಿದೆ. ವರ್ಗಾವಣೆಯಿಂದ ನೊಂದ ಸಿಬ್ಬಂದಿ ಸಚಿವ ಸತೀಶ್ ಜಾರಕಿಹೊಳಿಯನ್ನು ಭೇಟಿಯಾಗಿ ಪಾಲಿಕೆ ಆಯುಕ್ತರಾದ ಶುಭಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದೇ ವಿಚಾರ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗ್ತಿದ್ದು ಸಿಬ್ಬಂದಿ ವರ್ಗಾವಣೆ ಬಿಸಿಬಿಸಿ ಸುದ್ದಿಯಾಗಿದೆ. ಆಯುಕ್ತರು ವರ್ಗಾವಣೆ ಮೂಲಕ ನಮಗೆ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮುಂದೆ ಅಳಲು ತೋಡಿಕೊಂಡಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ಸಿಬ್ಬಂದಿಯನ್ನು ವರ್ಗಾವಣೆ ಮಾಡಿರುವುದಾಗಿ ಶುಭಾ ಸ್ಪಷ್ಟವಾಗಿ ಹೇಳಿದ್ದಾರೆ.

ಆಯುಕ್ತ ಶುಭಾರನ್ನು ವರ್ಗಾವಣೆ ಮಾಡುವಂತೆ ಬೆಳಗಾವಿ ಮಹಾನಗರ ಪಾಲಿಕೆ ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ. ಕೆಎಂಎಸ್ ಅಧಿಕಾರಿಗೆ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹುದ್ದೆ ನೀಡಲಾಗಿದೆ. 6 ಲಕ್ಷ ಜನಸಂಖ್ಯೆ ಹೊಂದಿರುವ ಬೆಳಗಾವಿಗೆ ಇದೆ ಮೊದಲ ಬಾರಿಗೆ ಕೆಎಂಎಸ್ ಅಧಿಕಾರಿ ಆಯುಕ್ತ ಆಗಿ ಬಂದಿದ್ದಾರೆ. ಐಎಎಸ್ ಅಧಿಕಾರಿಯನ್ನು ಬೆಳಗಾವಿ ಮಹಾನಗರ ಪಾಲಿಕೆಗೆ ನಿಯೋಜಿಸುವಂತೆ ಸಚಿವರಿಗೆ ಮನವಿ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button