Kannada NewsKarnataka NewsLatest

*ಶೀತಗಾಳಿ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಾದ್ಯಂತ ಚಳಿ ಆರರ್ಭಟ ಜೋರಾಗಿದೆ. ಇನ್ನೆರಡು ದಿನಗಳಲ್ಲಿ ರಾಜ್ಯಾದ್ಯಂತ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿಯಲಿದೆ. ಸಮತೋಲಿತ ಆಹಾರದ ಜೊತೆಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಲಹೆ ನೀಡಿದೆ.

ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಗೆ ಕುಸಿಯಲಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9ರಿಂದ 12 ಡಿಗ್ರಿ ಸೆಲ್ಸಿಯಸ್ ಗೆ ಕುಸಿಯಲಿದೆ. ಬೆಂಗಳೂರಿನಲ್ಲಿ 12ರಿಂದ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಕನಿಷ್ಠ ತಾಪಮಾನ 12ರಿಂದ 13 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button