ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿವಿಧ ರಾಜ್ಯಗಳಲ್ಲಿ ಶೀತ ಗಾಳಿ, ದಟ್ಟ ಮಂಜು ಕವಿದ ವಾತಾವರಣವಿದ್ದು, ಕರ್ನಾಟಕದಲ್ಲಿ ಶೀತಗಾಳಿ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಶೀತ ಗಾಳಿ ಹೆಚ್ಚಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದೆಹಲಿ, ನೋಯ್ಡಾ, ಘಾಜಿಯಾಬಾದ್, ಗುರುಗ್ರಾಮ, ಹರಿಯಾಣ, ಪಂಜಾಬ್, ಚಂಡೀಗಢ, ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದಾದ್ಯಂತ ಶೀತ ಗಾಳಿ, ದಟ್ಟ ಮಂಜಿನಿಂದಾಗಿ ಜನರು ತತ್ತರಿಸಿದ್ದಾರೆ. ಈ ನಡುವೆ ಈ ರಾಜ್ಯಗಳಲ್ಲಿ ಜನವರಿ 21ರಿಂದ 25ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಜನವರಿ 22ರಿಂದ 25ರವರೆಗೆ ದೆಹಲಿ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ಜ.23 ಹಾಗೂ 24ರಂದು ವಾಯುವ್ಯ ಭಾರತದ ಕೆಲ ಪ್ರದೇಶಗಳಲ್ಲಿ ಮಳೆಯಾಗಲಿದೆ.
ಇನ್ನು ಜಮ್ಮುಕಾಶ್ಮೀರ, ಹಿಮಾಚಲಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ, ದೆಹಲಿ, ಉತ್ತರ ರಾಜಸ್ಥಾನಗಳಲ್ಲಿ ಜ.23 ಹಾಗೂ ಜ.24ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. 50 ಕೀ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
*ಭೀಕರ ಅಪಘಾತ; ಇಬ್ಬರು ಕಾಲೇಜು ವಿದ್ಯಾರ್ಥಿಗಳು ದುರ್ಮರಣ*
https://pragati.taskdun.com/trukbikeaccidenttwo-students-deathudupi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ