Kannada NewsKarnataka News

*ಮತ್ತಷ್ಟು ಹೆಚ್ಚಾದ ಚಳಿ: ಎಚ್ಚರಿಕೆಯಿಂದ ಇರಲು ಸೂಚಿಸಿದ ತಜ್ಞರು*

ಪ್ರಗತಿವಾಹಿನಿ ಸುದ್ದಿ : ಕರ್ನಾಟಕದಲ್ಲಿ ಚಳಿ ಮತ್ತಷ್ಟು ಹೆಚ್ಚಾಗಿದ್ದು, ವೃದ್ಧರು, ಮಕ್ಕಳು ಹಾಗೂ ಬಾಣಂತಿಯರು ಎಚ್ಚರಿಕೆಯಿಂದ ಇರುವಂತೆ ತಜ್ಞರು ಸೂಚಿಸಿದ್ದಾರೆ.

ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ.

Home add -Advt

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚಳಿ ಜತೆ ಒಣ ಹವೆಯ ವಾತಾವರಣ ಇರಲಿದೆ.

ಪ್ರಮುಖವಾಗಿ ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ಹಾಗೂ ವೃದ್ಧರು, ಮಕ್ಕಳು ಹಾಗೂ ಬಾಣಂತಿಯರು ಎಚ್ಚರಿಕೆಯಿಂದ ಇರುವಂತೆ ತಜ್ಞರು ಸೂಚಿಸಿದ್ದಾರೆ. 

Related Articles

Back to top button