Belagavi NewsBelgaum NewsKannada NewsKarnataka News

*ಮತ್ತೆ ಹೆಚ್ಚಾದ ಚಳಿ:  ಶೀತಗಾಳಿಗೆ ಜನ ಕಂಗಾಲು*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮೈ ಕೊರೆಯುವ ಚಳಿ ಹೆಚ್ಚಾಗಿದೆ. ದಟ್ಟ ಮಂಜು ಹಾಗೂ ಶೀತಗಾಳಿಗೆ ಜನರು ಕಂಗಾಲಾಗಿ, ಗಡಗಡ ನಡುಗುತ್ತಿದ್ದಾರೆ.

ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಥಂಡಿ ಹೆಚ್ಚಾಗಲಿದ್ದು ಒಣಹವೆ ವಾತಾವರಣವೇ ಇರಲಿದೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

Home add -Advt

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದ‌ರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣ ಮುಂದುವರಿಯಲಿದ್ದು ಡಿ. 30 ಹಾಗೂ ಜ1 ಕ್ಕೆ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಚಳಿ ಜತೆ ಒಣಹವೆ ವಾತಾವರಣ ಇರಲಿದೆ.

ಇನ್ನು ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ. 

Related Articles

Back to top button