Belagavi NewsBelgaum NewsKannada NewsKarnataka News

*ರಾಜ್ಯದಲ್ಲಿ ಕಡಿಮೆಯಾದ ಚಳಿ ಅಬ್ಬರ: ಹಲವೆಡೆ ಮಳೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಭಾಗದಲ್ಲಿ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಕಡೆ ಮಳೆರಾಯ ಅಬ್ಬರಿಸಿದ್ದು, ಚಳಿ ಕಡಿಮೆಯಾಗಿ ಶೀತಗಾಳಿ ಬೀಸಿ ತುಂತುರು ಮಳೆ ಸುರಿಯುತ್ತಿದೆ. 

ಚಂಡಮಾರುತದ ಪರಿಣಾಮ ಮುಂದಿನ ಮೂರು ದಿನ ಇದೇ ರೀತಿಯ ವಾತಾವರಣ ಇರಲಿದೆ. ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. 

Home add -Advt

ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

Related Articles

Back to top button