Karnataka News

*ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಉಪನ್ಯಾಸಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಕಾಲೇಜು ಉಪನ್ಯಾಸಕನನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ.

ಪುನೀತ್ ಬಂಧಿತ ಆರೋಪಿ. ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದ ಪುನೀತ್ ವಿದ್ಯಾರ್ಥಿನಿಗೆ ಅರ್ಥವಾಗದ ವಿಷಯಗಳನ್ನು ಹೇಳಿಕೊಡುವುದಾಗಿ ಹೇಳಿ ಸಲುಗೆ ಬೆಳಸಿಕೊಂಡಿದ್ದ. ಬಳಿಕ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ನಿನ್ನನ್ನೇ ಮದುವೆಯಾಗುತ್ತೇನೆ ಎಂದು ನಂಬಿಸಿ ಅತ್ಯಾಚಾರವೆಸಗಿದ್ದಾನೆ.

Related Articles
Home add -Advt

ಸಂತ್ರಸ್ತ ಯುವತಿ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ಉಪನ್ಯಾಸಕನ ವಿರುದ್ಧ ದೂರು ದಾಖಲಿಸಿದ್ದಳು. ಇದೀಗ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ.


Related Articles

Back to top button