ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಕಾರಣದಿಂದ ಕಳೆದ 8 ತಿಂಗಳುಗಳಿಂದ ಮುಚ್ಚಿದ್ದ ಕಾಲೇಜುಗಳು ನಾಳೆಯಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ.
ಪದವಿ, ಎಂಜಿನಿಯರಿಂಗ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ತರಗತಿಗಳು ನವೆಂಬರ್ 17ರಿಂದ ಆರಂಭವಾಗುತ್ತಿದ್ದು, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತ್ರ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೇರ ತರಗತಿಗಳು ನಡೆಯಲಿವೆ. ಉಳಿದ ವಿದ್ಯಾರ್ಥಿಗಳುಗೆ ಆನ್ ಲೈನ್ ತರಗತಿಗಳು ಆರಂಭವಾಗಲಿವೆ.
ಕಾಲೇಜುಗಳನ್ನು ಆರಂಭಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅದರಂತೆ ಕಾಲೇಜುಗಳು ಆರಂಭವಾಗಲಿವೆ. ಕಾಲೇಜ್ ಗೆ ಬರುವ ಮುನ್ನ ವಿದ್ಯಾರ್ಥಿಗಳು ಹಾಗೂ ಪ್ರಾದ್ಯಾಪಕರು ಕೋವಿಡ್ ಟೆಸ್ಟ್ ಗೆ ಒಳಗಾಗಿ ಕೋವಿಡ್ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ. ಮಾಸ್ಕ್, ಸಾಮಾಜಿಕ ಅಂತರ ಪಾಲನೆ, ಸ್ವಚ್ಚತೆ, ಸ್ಯಾನಿಟೈಸರ್ ಗಳ ಬಳಕೆ ಕಡ್ಡಾಯ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ