Latest

ಕಾಲೇಜು ಆರಂಭದ ಬೆನ್ನಲ್ಲೇ ವಿದ್ಯಾರ್ಥಿಗಳು ಶಿಕ್ಷಕರಲ್ಲಿ ಹೆಚ್ಚಿದ ಕೊರೊನಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಕಾಲೇಜುಗಳು ಆರಂಭವಾಗಿದ್ದು, ಶಾಲೆಗಳನ್ನು ಕೂಡ ತೆರೆಯುವ ಬಗ್ಗೆ ಇಂದು ಮಹತ್ವದ ನಿರ್ಧಾರ ಹೊರಬೀಳಲಿದೆ. ಈ ನಡುವೆ ಕಾಲೇಜುಗಳ ಆರಂಭದ ಬೆನ್ನಲ್ಲೇ ಕೊರೊನಾ ಸೋಂಕು ಕೂಡ ಹೆಚ್ಚಿದ್ದು, 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಕೋವಿಡ್ ಕಾಣಿಸಿಕೊಂಡಿದೆ.

ಕಾಲೇಜು ಆರಂಭವಾಗಿ ಕೇವಲ 5 ದಿನಕ್ಕೆ 117 ವಿದ್ಯಾರ್ಥಿಗಳು ಹಾಗೂ 51 ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಗಳೂರಿನಲ್ಲಿ 29, ಚಾಮರಾಜನಗರದಲ್ಲಿ 8 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ.

ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೋಮಾ ಕಾಲೇಜುಗಳನ್ನು ಆರಂಭಿಸಲಾಗಿದ್ದರೂ ಅತಿ ಹೆಚ್ಚು ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

 

Home add -Advt

Related Articles

Back to top button