
ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ವಸತಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿಯಲ್ಲಿ ನಡೆದಿದೆ.
17 ವರ್ಷ ಆಫ್ರಿನ್ ಜಾಮದಾರ್ ಮೃತ ವಿದ್ಯಾರ್ಥಿನಿ. ಇಂದು ಪರೀಕ್ಷೆ ಇದ್ದ ಕಾರಣಕ್ಕೆ ವಿದ್ಯಾರ್ಥಿನಿ ಮಧ್ಯರಾತ್ರಿವರೆಗೂ ವಸತಿ ನಿಯದ ಕಟ್ಟಡಲ್ಲಿ ಓದುತ್ತಿದ್ದಳು. ಈ ವೇಳೆ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಆಫ್ರಿನ್ ಜಾಮದಾರ್ ಗೋಕಾಕ್ ಮೂಲದವಳು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ