Kannada NewsKarnataka NewsLatest

*ಬಹುಮಾನ ಸಿಗಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಬಹುಮಾನ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಪ್ಯದಲ್ಲಿ ನಡೆದಿದೆ.

17 ವರ್ಷದ ನಿಶಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವಳು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ನಿಶಾ ಎರಡು ವಾರದ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದಳು. ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗಲಿಲ್ಲ ಎಂದು ಬೇಸರಗೊಂದಿದ್ದ ನಿಶಾ, ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಖಿನತೆಗೆ ಜಾರಿದ್ದಳು.

Home add -Advt

ಕ್ರೀಡಾಕೂಟದಲ್ಲಿ ಬಹುಮಾನ ಸಿಗಲಿಲ್ಲ ಎಂಬ ಕಾರಣಕ್ಕೆ ತೋಟಕ್ಕೆ ಸಿಂಪಡಿಸುವ ಕೀಟನಾಶಕ ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ನಿಶಾಳನ್ನು ಪೋಷಕರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Related Articles

Back to top button