ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 8 ತಿಂಗಳ ಬಳಿಕ ರಾಜ್ಯಾದ್ಯಂತ ಕಾಲೇಜುಗಳು ಪುನರಾರಂಭಗೊಂಡಿದ್ದು, ಕೊರೊನಾ ಭೀತಿ ನಡುವೆಯೆ ತರಗತಿಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಹಾಗೂ ಪ್ರಾದ್ಯಾಪಕರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಮಾಸ್ಕ್, ಸಮಾಜಿಕ ಅಂತರ ಕಡ್ಡಾಯವಾಗಿದೆ.
ಕಾಲೇಜುಗಳನ್ನು ಆರಂಭಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅದರಂತೆ ಕಾಲೇಜುಗಳು ಆರಂಭಗೊಂಡಿವೆ. ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ತರಗತಿಗಳು ಆರಂಭವಾಗಿದ್ದು, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ನೇರ ತರಗತಿಗಳು ನಡೆಯುತ್ತಿವೆ.
8 ತಿಂಗಳ ಬಳಿಕ ಕಾಲೇಜುಗಳು ಆರಂಭವಾದರೂ ಕೂಡ ಹಲವು ಕಾಲೇಜುಗಳಿಗೆ ವಿದ್ಯಾರ್ಥಿಗಳೇ ಆಗಮಿಸಿಲ್ಲ. ಇನ್ನು ಕೆಲವೆಡೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ತುಂಬಾ ಕಡಿಮೆಯಿದೆ. ಅನೇಕಕಡೆಗಳಲ್ಲಿ ವಿದ್ಯಾರ್ಥಿಗಳಿಲ್ಲದೇ ತರಗತಿಯಿಂದಲೇ ಪ್ರಾದ್ಯಾಪಕರು ಆನ್ ಲೈನ್ ಕ್ಲಾಸ್ ಆರಂಭಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ