
ಪ್ರಗತಿವಾಹಿನಿ ಸುದ್ದಿ : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ನಸುಕಿನಜಾವ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಯಶವಂತಪುರದ ಫ್ಲೈ ಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಫ್ಲೈ ಓವರ್ ಮೇಲೆ ಬೈಕ್‌ಗೆ ಕಾರು ಹಿಂಬದಿಯಿಂದ ಡಿಕ್ಕಿಯಾದ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮೇಲ್ವೇತುವೆಯಿಂದ ಕೆಳಕ್ಕೆ ಹಾರಿದೆ. ಭೀಕರ ಅಪಘಾತದಲ್ಲಿ ಕಾರಲ್ಲಿದ್ದ ಮೂವರು, ಬೈಕ್‌ನಲ್ಲಿದ್ದ ಇಬ್ಬರಿಗೆ ತೀವ್ರವಾಗಿ ಗಾಯಗಳಾಗಿವೆ.
ಓರ್ವ ಮಹಿಳೆ ಸೇರಿ ಐವರ ಸ್ಥಿತಿ ಗಂಭೀರವಾಗಿದ್ದು, ಬೆಳಗಿನಜಾವ 3-45ರ ಸುಮಾರಿಗೆ ಈ ಅಪಘಾತ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಯ್ಸಳ ಪೊಲೀಸರು ದೌಡಾಯಿಸಿ ಗಾಯಾಳುಗಳ ರಕ್ಷಣೆ ಮಾಡಿ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ