ಸುವರ್ಣ ವಿಧಾನಸೌಧಕ್ಕೆ ಕಲರ್ ಲೈಟಿಂಗ್: ಸಿಎಂ ಉದ್ಘಾಟನೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಸಚಿವರು ಮತ್ತು ಶಾಸಕರು ಈ ಸಂದರ್ಭಕ್ಕೆ ಸಾಕ್ಷಿಯಾದರು.

ನಾಡಿಗೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮದ ಪ್ರಯುಕ್ತ ಬೆಳಗಾವಿಯ ಸುವರ್ಣ ವಿಧಾನ ಸೌಧದ ಕಟ್ಟಡಕ್ಕೆ ವಿಶೇಷ ವಿನ್ಯಾಸವುಳ್ಳ ಶಾಶ್ವತ ಬಣ್ಣ ಬಣ್ಣದ ದೀಪಾಲಂಕಾರ ಮಾಡಲಾಗಿದೆ.
ಪ್ರತಿ ಶನಿವಾರ, ಭಾನುವಾರ ಹಾಗೂ ಸರಕಾರಿ ರಜಾ ದಿನಗಳಂದು ವಿದ್ಯುತ್ ದೀಪ ಬೆಳಗಲಿದ್ದು, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ