ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಯುಗಾದಿ ಹಬ್ಬದ ಸಂದರ್ಭದಲ್ಲೇ ಕಮರ್ಷಿಯಲ್ ಸಿಲಿಂಡರ್ ಬಳಕೆದಾರರರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ವಾಣಿಜ್ಯ ಬಳಕೆ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದ್ದು, ಬರೋಬ್ಬರಿ 250 ರೂಪಾಯಿ ಹೆಚ್ಚಳವಾಗಿದೆ.
ಈ ಮೂಲಕ 19 ಕೆಜಿ ಒಂದು ಸಿಲಿಂಡರ್ ದರ ದೆಹಲಿಯಲ್ಲಿ 2253 ರೂಪಾಯಿ ಆಗಿದೆ. 14.2 ಕೆಜಿ ಸಿಲಿಂಡರ್ ಬೆಲೆ 949.50 ರೂಪಾಯಿ ಆಗಿದೆ.
ಮುಂಬೈನಲ್ಲಿ 19 ಕೆಜಿ ಕಮರ್ಷಿಯಲ್ ಸಿಲಿಂಡರ್ ದರ 2205 ರೂ ಆಗಿದ್ದರೆ, ಚೆನ್ನೈ ನಲ್ಲಿ 2406 ರೂ ಆಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯಾಗಿದ್ದ ಬೆನ್ನಲ್ಲೇ ಇದೀಗ ಮತ್ತೆ ಕಮರ್ಷಿಯಲ್ ಸಿಲಿಂಡರ್ ದರ ಭಾರಿ ಪ್ರಮಾಣದಲ್ಲಿ ಹೆಚ್ಚಿಸಿರುವುದು ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
ಚಿನ್ನ-ಬೆಳ್ಳಿ ದರದಲ್ಲಿ ಇಂದು ಏನೆಲ್ಲ ಬದಲಾವಣೆಯಾಗಿದೆ ಗೊತ್ತೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ