
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ 6 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೆಶ ಹೊರಡಿಸಿದೆ.
ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ ರೆಡ್ದಿ ನೇಮಕಗೊಂಡಿದ್ದಾರೆ. ಹಾಲಿ ಆಯುಕ್ತರಾಗಿದ್ದ ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಕೆ ಎಸ್ ಆರ್ ಪಿ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಅವರನ್ನು ಲಾ ಆಂಡ್ ಆರ್ಡರ್ ಎಡಿಜಿಪಿಯಾಗಿ, ಕೆ ಎಸ್ ಆರ್ ಪಿ ಎಡಿಜಿಪಿಯಾಗಿ ಆರ್.ಹಿತೇಂದ್ರ, ಸಿಐಡಿ ಎಸ್ ಪಿಯಾಗಿ ಎಂ .ಎನ್.ಅನುಚೇತ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಪರಿಷತ್ ಚುನಾವಣೆ: ಶಸ್ತ್ರಾಸ್ತ್ರ ವಿನಾಯಿತಿ ನೀಡಲು ಜಿಲ್ಲಾಮಟ್ಟದ ಸ್ಕ್ರೀನಿಂಗ್ ಕಮಿಟಿ ರಚನೆ