Cancer Hospital 2
Beereshwara 36
LaxmiTai 5

*ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಕ್ಯಾನ್ಸರ ಚಿಕಿತ್ಸಾ ವಿಭಾಗವು ಪ್ರಾಥಮಿಕ ಆರೋಗ್ಯ ಹಾಗೂ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ನಗರ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬನ್ಯಾಂಗ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಗ್ರಾಮೀಣ ಭಾಗಗಳಲ್ಲಿ ತಜ್ಞವೈದ್ಯರು ಇರದೇ ಇರುವ ಕಾರಣ ಕ್ಯಾನ್ಸರನಂತಹ ಮಾರಣಾಂತಿಕ ಖಾಯಿಲೆಗಳನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಅನೇಕರು ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ವೈದ್ಯಾಧಿಕಾರಿಗಳಿಗೆ ಅವಶ್ಯ ತರಬೇತಿ ನೀಡಿ, ಖಾಯಿಲೆಗಳನ್ನು ಶೀಘ್ರಪತ್ತೆ ಹಚ್ಚಿ ಚಿಕಿತ್ಸೆಗೆ ಸಹಕರಿಸುವಂತೆ ತರಬೇತುಗೊಳಿಸಬೇಕಾಗಿದೆ. ಈ ತರಬೇತಿ ಶಿಬಿರವು ಖಂಡಿತವಾಗಿ ಸಹಯವಾಗಲಿದೆ ಎಂದು ಅವರು ತಿಳಿಸಿದರು.

Emergency Service

ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ ಕೋಣೆ ಅವರು ಮಾತನಾಡಿ, ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯರು ನಿಯಮಿತವಾಗಿ ತಮ್ಮ ಜ್ಞಾನವನ್ನು ಉನ್ನತ್ತಿಕರಿಸಿಕೊಳ್ಳುವದು ಅತ್ಯವಶ್ಯವಾಗಿದೆ. ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಅನ್ನು ಪರೀಕ್ಷಿಸಿ ರೋಗ ಕಂಡು ಹಿಡಿದು ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ನೀಡುವದು ಅತ್ಯಗತ್ಯವಿದೆ. ಆದ್ದರಿಂದ ಆರೋಗ್ಯ ಸೇವೆಯಲ್ಲಿ ತೊಡಗಿರುವವರಿಗೆ ತರಬೇತಿ ನೀಡುವದು ಅತ್ಯವಶ್ಯಕವಾಗಿದೆ. ಆದ್ದರಿಂದ ಆಶಾ ಕಾರ್ಯಕರ್ತೆಯರು ಮತ್ತು ಶುಶ್ರೂಷಾ ಸಿಬ್ಬಂದಿಗೆ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಅನ್ನು ಪತ್ತೆಹಚ್ಚಲು ಅನುವು ಮಾಡಿಕೊಡಲು ಅಗತ್ಯ ಉಪಕರಣಗಳನ್ನು ತರಬೇತಿ ಮತ್ತು ಪೂರೈಸಲು ಸರ್ಕಾರ ಯೋಜಿಸುತ್ತಿದೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಕೆಎಲ್ ಇ ಸಂಸ್ಥೆಯು ಕ್ಯಾನ್ಸರ ಸಂಬಂಧಿತ ಖಾಯಿಲೆಗಳಿಗೆ ಒಂದೇ ಸೂರಿನಡಿ ಸಕಲ ಸೌಲಭ್ಯ ಕಲ್ಪಿಸುವದರಿಂದ ಕ್ಯಾನ್ಸರ ರೋಗಿಗಳು ಗುಣಮಟ್ಟದ ಚಿಕಿತ್ಸೆ ಪಡೆಯಲು ದೂರದೂರಿಗೆ ಪ್ರಯಾಣಿಸುವದು ತಪ್ಪಲಿದೆ ಎಂದು ಹೇಳಿದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ ದಯಾನಂದ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಯುಎಸ್ಎಂ  ಕೆಎಲ್ಇ ನಿರ್ದೇಶಕರಾದ ಡಾ. ಹೆಚ್ ಬಿ ರಾಜಶೇಖರ, ಡಾ. ವಿ ಡಿ ಪಾಟೀಲ, ಕ್ಯಾನ್ಸರ ತಜ್ಞವೈದ್ಯರಾದ ಡಾ. ಕುಮಾರ ವಿಂಚುರಕರ, ಡಾ. ಮಹೇಶ ಕಲ್ಲೊಳ್ಳಿ, ಡಾ. ರೋಹನ ಭಿಸೆ, ಡಾ. ರಾಜೇಂದ್ರ ಮೆಟಗುಡಮಠ, ಡಾ. ಇಮ್ತಿಯಾಜ್ ಅಹ್ಮದ ಕೆಎಲ್ಇ ಇನ್ಸ್ಟಿಟ್ಯೂಟ್ ಆಫ್ ಅಂಕಾಲಾಜಿಯ ಸಿಒಒ ನವೀನ್ ಎನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Bottom Add3
Bottom Ad 2