
ಕಮಿಷನರ್ ಬಿ.ದಯಾನಂದ್ ಸಸ್ಪೆಂಡ್
ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ವಿಜಯೋತ್ಸವದ ವೇಳೆ ಚಿನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದಿರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಲ್ತುಳಿತ ದುರಂತ ಪ್ರಕರಣ ಸಂಬಂಧ, ಬೆಂಗಳೂರು ಪೊಲೀಸ್ ಕಮಿಷ್ನರ್ ಬಿ.ದಯಾನಂದ್, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಸಿಪಿಐ, ನಿಗದಿತ ಏರಿಯಾದ ಎಸಿಪಿ, ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.