

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷ -ಉಪಾಧ್ಯಕ್ಷರನ್ನು ನೇಮಕ ಮಾಡಿರುವ ರಾಜ್ಯ ಸರಕಾರ ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕ ಮಾಡಲು ಸಚಿವರ, ಶಾಸಕರ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ. ಸಮಿತಿಯಲ್ಲಿ ಒಟ್ಟೂ 11 ಜನರಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯ ಸಮಿತಿಯಲ್ಲಿ ಸಚಿವರಾದ ರಾಮಲಿಂಗಾ ರಡ್ಡಿ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಸಂತೋಷ ಲಾಡ್, ಶರಣಪ್ರಕಾಶ ಪಾಟೀಲ, ರಾಜ್ಯಸಭಾ ಸದಸ್ಯ ಜೆ.ಸಿ.ಚಂದ್ರಶೇಖರ, ಶಾಸಕರಾದ ರೂಪಕಲಾ, ರಿಜ್ವಾನ್ ಅರ್ಷದ್, ವಿ.ಆರ್.ಸುದರ್ಶನ, ಹರೀಶ್ ಕುಮಾರ ಸದಸ್ಯರಾಗಿದ್ದಾರೆ.
ಸಮಿತಿ ತಕ್ಷಣ ಕಾರ್ಯಪ್ರವೃತ್ತವಾಗಿ ಒಂದು ತಿಂಗಳೊಳಗಾಗಿ ನಿರ್ದೇಶಕರು ಹಾಗೂ ಸದಸ್ಯ ಪಟ್ಟಿ ಸಿದ್ಧಪಡಿಸಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ