ಪ್ರಗತಿವಾಹಿನಿ ಸುದ್ದಿ, ನವದೆಹಲಿ:
ವಿವಿಧ ವಿಶ್ವವಿದ್ಯಾಲಯಗಳ ಪದವಿ ಪ್ರವೇಶಕ್ಕೆ ರಾಷ್ಟ್ರಾದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ.
ಇದಕ್ಕಾಗಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ವೆಬ್ ಸೈಟ್ ನಲ್ಲಿ ವಿವರ ಪ್ರಕಟಿಸಲಾಗಿದೆ.
ರಾಜ್ಯಸಭೆಯಲ್ಲಿ ಡಾ.ಪ್ರಭಾಕರ ಕೋರೆ ಕೇಳಿದ ಪ್ರಶ್ನೆಗೆ ಕೇಂದ್ರ ಮಾನವಸಂಪನ್ಮೂಲ ಸಚಿವ ರಮೇಶ ಪೊಖ್ರಿಯಾಲ್ ಲಿಖಿತ ಉತ್ತರ ನೀಡಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ರಚಿಸಲಾಗಿದ್ದ ಡಾ.ಕೆ.ಕಸ್ತೂರಿ ರಂಗನ್ ಸಮಿತಿ ಈ ಸಂಬಂಧ ವರದಿ ನೀಡಿದ್ದು, ರಾಷ್ಟ್ರಾದ್ಯಂತ ಏಕರೂಪದ ಪರೀಕ್ಷೆ ನಡೆಸುವುದರಿಂದ ವಿವಿಗಳಿಗೂ ಹಾಗೂ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ ಎಂದು ಹೇಳಿದೆ. ವಿದ್ಯಾರ್ಥಿಗಳಿಗೆ ಒಂದರ ಬದಲು ಎರಡು ಅವಕಾಶ ನೀಡುವುದಕ್ಕೂ ಸಲಹೆ ನೀಡಲಾಗಿದೆ. ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಕೇಳಲಾಗಿದೆ ಎಂದು ವಿವರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ