Kannada NewsKarnataka NewsLatestSports
*ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಕೆ ಎಸ್ ಶಿಲ್ಪ ಅವರಿಗೆ 20 ಲಕ್ಷ ರೂ.ಚೆಕ್ ವಿತರಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಸ್ಕಾಟ್ ಲ್ಯಾಂಡಿನ ಗ್ಲಾಸ್ಕೋದಲ್ಲಿ ನಡೆದ ಕಾಮನ್ ವೆಲ್ತ್ 2026 ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್ ಪುಟ್ ವಿಭಾಗದಲ್ಲಿ ಕಂಚಿನ ಪದಕ ವಿಜೇತರಾದ ಕೆ ಎಸ್ ಶಿಲ್ಪ ಅವರಿಗೆ ಸಿಎಂ ಡಿ ಕೆ ಶಿವಕುಮಾರ್ ಅಭಿನಂದಿಸಿ, ಚೆಕ್ ವಿತರಿಸಿದರು.
ವಿಧಾನಸೌಧದ ಕಚೇರಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್, ಕೆ.ಎಸ್.ಶಿಲ್ಪ ಅವರಿಗೆ ಅಭಿನಂದನೆ ಸಲ್ಲಿಸಿ, ಕೊಡುಗೆಯಾಗಿ 20 ಲಕ್ಷ ರೂ.ಗಳ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಡಿಸಿಎಂ ಡಾ ಜಿ ಪರಮೇಶ್ವರ, ಶಾಸಕ ರವಿಶಂಕರ್, ಕರ್ನಾಟಕ ಒಲಿಂಪಿಂಕ್ ಅಸೋಸಿಯೇಷನ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಇನ್ನಿತರರು ಉಪಸ್ಥಿತರಿದ್ದರು.



