
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ಕೇಂದ್ರ ಸರ್ಕಾರ ದೇಶದ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕಮರ್ಷಿಯಲ್ ಸಿಲಿಂಡರ್ ದರ ಇಳಿಕೆ ಮಾಡಿದೆ.
ಕಳೆದ ಕೆಲ ತಿಂಗಳುಗಳಿಂದ ವಾಣಿಜ್ಯ ಬಳಕೆ ಸಿಲಿಂಡರ್ ದರ ಏರಿಕೆಯಾಗುತ್ತಲೇ ಇತ್ತು. ಇದರಿಂದಾಗಿ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಆಹಾರದ ಬೆಲೆ ಹೆಚ್ಚಳವಾಗಿತ್ತು. ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ಹೋಟೆಲ್ ಮಾಲೀಕರಿಗೂ ತಲೆನೋವಾಗಿತ್ತು. ಇದೀಗ ಕೇಂದ್ರ ಬಜೆಟ್ ಮಂಡನೆಗೂ ಮುನ್ನ ವಾಣಿಜ್ಯ ಸಿಲಿಂಡರ್ ದರ ಇಳಿಕೆ ಮಾಡಲಾಗಿದೆ.
19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 91.50 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ದೇಶದ ಜನತೆಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.
ಆರ್ಥಿಕತೆ ಬೆಳವಣಿಗೆಗೆ ಪೂರಕ ಬಜೆಟ್ ಮಂಡಿಸುವ ನಿರೀಕ್ಷೆ; ಸಿಎಂ ಬೊಮ್ಮಾಯಿ ವಿಶ್ವಾಸ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ