
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಪರಿಹಾರ ಧನ ಹೆಚ್ಚಳ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಈ ಮೊದಲು ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು.
ಇದರ ಜೊತೆಗೆ, ಆರ್ ಸಿಬಿ ಮತ್ತು ಕೆಎಸ್ ಸಿಎ ಸಹ ತಲಾ 10 ಲಕ್ಷ ರೂ ನೀಡುವುದಾಗಿ ಘೋಷಿಸಿವೆ.
ದುರ್ಘಟನೆಯಲ್ಲಿ ಒಟ್ಟೂ 11 ಜನರು ಮೃತಪಟ್ಟಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




