Karnataka NewsLatest

1610 ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಹಲವಾರು ರೀತಿಯ ವೃತ್ತಿನಿರತರಿಗೆ ಕರ್ನಾಟಕ ಸರಕಾರ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟೂ 1610 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂಬಂಧ ಬುಧವಾರ ಮಾಹಿತಿ ನೀಡಿದ್ದಾರೆ. ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ, ಕ್ಷೌರಿಕರು, ಮಡಿವಾಳರು ಸೇರಿದಂತೆ ಹಲವಾರು ವರ್ಗಗಳಿಗೆ ತಲಾ 5 ಸಾವಿರ ರೂ. ಪರಿಹಾರ ನೀಡುವ ಘೋಷಣೆ ಮಾಡಿದ್ದಾರೆ.

7.75 ಲಕ್ಷ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಪರಿಹಾರ ದೊರೆಯಲಿದೆ. ಜೊತೆಗೆ ಈಗಾಗಲೆ 2 ಸಾವಿರ ರೂ. ನೀಡಲಾಗಿದ್ದ ಕಟ್ಟಡ ಕಾರ್ಮಿಕರಿಗೆ ಹೆಚ್ಚುವರಿಯಾಗಿ 3 ಸಾವಿರ ರೂ. ಸೇರಿಸಿ ಒಟ್ಟೂ 5 ಸಾವಿರ ರೂ ನಿಡಲಾಗುತ್ತದೆ. ಒಟ್ಟೂ 15 ಲಕ್ಷ ಕಟ್ಟಡ ಕಾರ್ಮಿಕರಿಗೆ ಪ್ರಯೋಜನವಾಗಲಿದೆ. ವಲಸೆ ತಪ್ಪಿಸಲು ಈ ಘೋಷಣೆ ಮಾಡಲಾಗಿದೆ.

ಇದರ ಜೊತೆಗೆ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಿಗಳು ಸೇರಿದಂತೆ ಅನೇಕರಿಗೆ ವಿದ್ಯುತ್ ಬಿಲ್ ತುಂಬಲು ವಿನಾಯಿತಿ ಸೇರಿದಂತೆ ಅನೇಕ ಘೋಷಣೆಗಳನ್ನು ಯಡಿಯೂರಪ್ಪ ಮಾಡಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button