Latest

ಅಶ್ವತ್ಥನಾರಾಯಣ ವಿರುದ್ಧ ಮತ್ತೊಮ್ಮೆ ದೂರು; FIR ದಾಖಲು

ಪ್ರಗತಿವಾಹಿನಿ ಸುದ್ದಿ, ಮೈಸೂರು : ಟಿಪ್ಪು ಸುಲ್ತಾನ್ ಹೊಡೆದು ಹಾಕಿದ ರೀತಿಯಲ್ಲೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಸಾರ್ವಜನಿಕ ಸಭೆಯಲ್ಲಿ ಹೇಳಿಕೆ ನೀಡಿದ್ದ ಅಂದಿನ ಸಚಿವ ಅಶ್ವತ್ಥನಾರಾಯಣ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕಳೆದ ಫೆಬ್ರವರಿ 12ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ಅಶ್ವತ್ಥನಾರಾಯಣ ಇಂತಹ ಹೇಳಿಕೆ ನೀಡಿದ್ದರು. ಫೆ.17ರಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಅವರ ವಿರುದ್ಧ ದೂರು ನೀಡಿದ್ದರೂ ಕ್ರಮವಾಗಿರಲಿಲ್ಲ. ಹಾಗಾಗಿ ಬುಧವಾರ ದೇವರಾಜ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ ಮತ್ತೊಮ್ಮೆ ದೂರು ನೀಡಿದ್ದು, ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 153 ಮತ್ತು 156ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

https://pragati.taskdun.com/tractorbikeaccidentpdodeath/

Related Articles

Back to top button