Latest

ದೇಶದಲ್ಲಿ ಒಂದೇ ದಿನ ಅತಿ ಹೆಚ್ಚು ಸೋಂಕಿತರು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಕಳೆದ 24 ಗಂಟೆಯಲ್ಲಿ 83,883 ಮಂದಿಗೆ ಕೋವಿಡ್ ಪಾಸಿಟೀವ್ ಬಂದಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 38,53,407ಕ್ಕೆ ಏರಿಕೆ ಆಗಿದೆ.

ಇದು ಈವರೆಗೆ ಒಂದೇ ದಿನದಲ್ಲಿ ಪತ್ತೆಯಾದ ಅತಿ ಹೆಚ್ಚು ಪ್ರಕರಣವಾಗಿದೆ. ಕಳೆದ 24 ಗಂಟೆಗಳಲ್ಲಿ 1,043 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ 67,376 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ 8,15,538 ಸಕ್ರಿಯ ಪ್ರಕರಣಗಳಿದ್ದು, 29,70,493 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Home add -Advt

Related Articles

Back to top button