ಸಚಿವರು ಸೇರಿ ಆ 6 ಮುಖಂಡರ ವಿರುದ್ಧ 15 ಹಿರಿಯ ಕಾಂಗ್ರೆಸ್ ನಾಯಕರಿಂದ ರಾಹುಲ್ ಗಾಂಧಿಗೆ ಕಂಪ್ಲೇಂಟ್!
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಂಗಳವಾರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸಚಿವರು ಸೇರಿದಂತೆ 6 ಮುಖಂಡರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕರು ರಾಹುಲ್ ಗಾಂಧಿಯವರಿಗೆ ದೂರು ನೀಡಿದ್ದಾರೆ. ಆ 6 ಜನರಿಗೆ ಎಚ್ಚರಿಕೆ ನೀಡುವಂತೆ ಮತ್ತು ಪಕ್ಷಕ್ಕೆ ಹಾಗೂ ರಾಜ್ಯಕ್ಕೆ ಹಾನಿಯುಂಟು ಮಾಡುವಂತಹ ಹೇಳಿಕೆ ನೀಡದಂತೆ ಕೋರಿ ಪತ್ರ ಬರೆದಿದ್ದಾರೆ.
ಹಿರಿಯ ನಾಯಕರಾದ ಬಿ.ಎಲ್.ಶಂಕರ, ವಿ.ಆರ್.ಸುದರ್ಶನ, ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ, ಎಲ್.ಹನುಮಂತಯ್ಯ, ಬಿ.ಎನ್.ಚಂದ್ರಪ್ಪ, ಪ್ರಕಾಶ ರಾಥೋಡ ಸೇರಿದಂತೆ 15 ಜನರು ಪತ್ರಕ್ಕೆ ಸಹಿ ಹಾಕಿದ್ದಾರೆ.
ರಾಜ್ಯದಲ್ಲಿ 136 ಶಾಸಕರೊಂದಿಗೆ ಕಾಂಗ್ರೆಸ್ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ಅತ್ಯಂತ ಉತ್ತಮವಾಗಿ ಸರಕಾರ ನಡೆಸಲಾಗುತ್ತಿದೆ. 58 ಸಾವಿರ ಕೋಟಿ ರೂ.ಗಳ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಮತ್ತು ಜಿಡಿಎಸ್ ನವರು ಸರಕಾರ ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ.
ಇದೇ ವೇಳೆ ನಮ್ಮದೇ ಪಕ್ಷದ ಕೆಲವು ಸಚಿವರು ಸೇರಿದಂತೆ 6ಕ್ಕಿಂತ ಹೆಚ್ಚು ಜನರು ಮುಖ್ಯಮಂತ್ರಿ ಸ್ಥಾನವನ್ನು ಕ್ಲೇಮ್ ಮಾಡುವ ಮೂಲಕ, ಗೊಂದಲ ಉಂಟಾಗುವ ರೀತಿಯ ಹೇಳಿಕೆ ಮೂಲಕ ಪಕ್ಷಕ್ಕೆ, ಸರಕಾರಕ್ಕೆ ಮತ್ತು ರಾಜ್ಯಕ್ಕೆ ಹಾನಿಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಎಲ್ಲರೂ ಸೇರಿ ಬಿಜೆಪಿ, ಜೆಡಿಎಸ್ ಹುನ್ನಾರದ ವಿರುದ್ಧ ಹೋರಾಡುವುದನ್ನು ಬಿಟ್ಟು ನಮ್ಮ ಪಕ್ಷದಲ್ಲೇ ಗೊಂದಲ ಮೂಡಿಸುವಂತಹ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದರಿಂದಾಗಿ ರಾಜ್ಯದ ಜನರು ನಮ್ಮ ಪಕ್ಷ ಮತ್ತು ಸರಕಾರದ ಮೇಲೆ ನಂಬಿಕೆಯನ್ನೇ ಕಳೆೆದುಕೊಳ್ಳುವಂತ ಸ್ಥಿತಿ ನಿರ್ಮಾಣವಾಗುತ್ತಿದೆ. ಇಂತವರಿಗೆ ಸೂಕ್ತ ಎಚ್ಚರಿಕೆ ನೀಡುವ ಜೊತೆಗೆ ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಹೇಳಿಕೆ ನೀಡದಂತೆ ನಿರ್ದೇಶನ ನೀಡಬೇಕು ಎಂದು ಅವರು ಕೋರಿದ್ದಾರೆ.
ಪೂರ್ಣ ಪತ್ರಕ್ಕಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ