
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಕಾಂಗ್ರೆಸ್ ಸರಕಾರದ 2023 -24ನೇ ಸಾಲಿನ ಆಯವ್ಯಯ ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಜನಸಾಮಾನ್ಯರಿಗೆ ಹೊರೆಯಾಗದಂತೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗಿದೆ. ತನ್ಮೂಲಕ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳ ಕುರಿತು ಟೀಕೆ ಮಾಡುತ್ತಿರುವ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲ ಭಾಗಗಳಿಗೂ, ಎಲ್ಲ ಕ್ಷೇತ್ರಗಳಿಗೂ ಹಣ ಒದಗಿಸುವ ಮೂಲಕ ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್ ಮಂಡಿಸಿದ್ದಾರೆ. ಕೇವಲ ಸಂಖ್ಯೆಯಲ್ಲಷ್ಟೇ ಅಲ್ಲ, ವೈಶಿಷ್ಟ್ಯತೆಯಲ್ಲೂ ಸಿದ್ದರಾಮಯ್ಯ ಅವರು ಈ ಬಜೆಟ್ ಮೂಲಕ ದಾಖಲೆ ಬರೆದಿದ್ದಾರೆ ಎಂದು ಚನ್ನರಾಜ ಪ್ರಶಂಸಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲಿದೆ ಎಂದು ಜನಸಾಮಾನ್ಯರಲ್ಲಿ ವಿಶ್ವಾಸ ಮೂಡಿಸುವಲ್ಲಿ ಈ ಬಜೆಟ್ ಯಶಸ್ವಿಯಾಗಿದೆ. ಮುಂದಿನ 5 ವರ್ಷ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿ ಬೆಳವಣಿಗೆ ಹೊಂದಲಿದೆ. ಇತರ ರಾಜ್ಯಗಳೂ ಕರ್ನಾಟಕ ಮಾದರಿಯನ್ನು ಅನುಸರಿಸುವ ಮುನ್ಸೂಚನೆ ಬಜೆಟ್ ನಲ್ಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ