ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಸೋಮವಾರದಿಂದ ಮೇ 24ರ ವರೆಗೆ ಕಂಪ್ಲೀಟ್ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ಪ್ರಕಟಿಸಿದ್ದಾರೆ. ಈಗಾಗಲೆ ಜಾರಿಯಲ್ಲಿರುವ ಕೊರೋನಾ ಕರ್ಫ್ಯೂ ಪರಿಣಾಮಕಾರಿಯಾಗದಿರುವ ಹಿನ್ನೆಲೆಯಲ್ಲಿ, ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಅವಶ್ಯಕ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಸಾಗಾಣಿಕೆ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.
ವಿಶೇಷವೆಂದರೆ, ಜನತಾಕರ್ಫ್ಯೂಗೂ ಈಗಿನ ಲಾಕ್ ಡೌನ್ ಗೂ ಹೆಚ್ಚಿನ ವ್ಯತ್ಯಾಸವೇನೂ ಕಾಣಿಸುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ, ಬೆಳಗ್ಗೆ 10 ಗಂಟೆಯ ನಂತರ ಒಬ್ಬ ವ್ಯಕ್ತಿಯೂ ರಸ್ತೆ ಮೇಲೆ ಓಡಾಡಲು ಬಿಡಲ್ಲ. ಪೊಲೀಸರಿಗೆ ಸೂಚಿಸಿದ್ದೇನೆ. ಇದನ್ನು ಸ್ವಲ್ಪ ದಿನ ನೋಡುತ್ತೇವೆ. ಜನ ಸಹಕರಿಸಲಿದ್ದರೆ ಇನ್ನಷ್ಟು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಮೇ 10ರಿಂದ ಲಾಕ್ ಡೌನ್? : ಸಂಜೆ 4 ಗಂಟೆಗೆ ಸಿಎಂ ಅಧಿಕೃತ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ