Latest

ತೌಕ್ತೆ ಚಂಡಮಾರುತಕ್ಕೆ 6 ಜನ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಕ್ಕೆ ಅಪ್ಪಳಿಸಿದ ತೌಕ್ತೆ ಚಂಡಮಾರುತ ಆರ್ಭಟಕ್ಕೆ ನಾಲ್ವರು ಬಲಿಯಾಗಿದ್ದು, ಕೇರಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ತೌಕ್ತೆ ಅಬ್ಬರ ಮುಂದುವರೆದಿದ್ದು, ಕೇರಳದಲ್ಲಿಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.

ತೌಕ್ತೆ ಚಂಡಮಾರುತದಿಂದ ಕಳೆದ 24 ಗಂಟೆಗಳಲ್ಲಿ ರಾಜ್ಯದ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. 73 ಗ್ರಾಮಗಳು ಸಂಕಷ್ಟಕ್ಕೀಡಾಗಿದ್ದು, 112 ಮನೆಗಳು ಹಾನಿಯಾಗಿವೆ. 139 ವಿದ್ಯುತ್ ಕಂಬಗಳು ಧರೆಗುರುಳಿದ್ದು, 22 ಟ್ರಾನ್ಸ್ ಫಾರ್ಮರ್ ಗಳಿಗೆ ಹಾನಿಯಾಗಿದೆ. ಕಡಲ ತೀರದಲ್ಲಿದ್ದ 318 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 11 ಪರಿಹಾರ ಕೇಂದ್ರಗಳಲ್ಲಿ 298 ಜನರಿಗೆ ಆಶ್ರಯ ನೀಡಲಾಗಿದೆ. ಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

Home add -Advt

ಇನ್ನು ಎರ್ನಾಕುಲಂ, ಕೋಜಿಕ್ಕೋಡ್ ನಲ್ಲಿ ಭಾರಿ ಮಳೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ಕೇರಳದ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ 18ರಂದು ಚಂಡಮಾರುತ ಗುಜರಾತ್ ತಲುಪಲಿದೆ.
ಜಿಲ್ಲೆ ಗಳಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ

Related Articles

Back to top button