ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಪಟ್ಟಣದ ವಿದ್ಯಾನಗರ ಬಡಾವಣೆಯ ಮನೆ ಮುಂದಿನ ಕಂಪೌಂಡ್ ಗೋಡೆ ಕುಸಿದ ಕಾರಣ ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕ ಅದರಡಿ ಸಿಲುಕಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಖಾನಾಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.