
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿರುವ ಈ ಸಾಲಿನ ಆಯವ್ಯಯ ಸಮಗ್ರ ಅಭಿವೃದ್ಧಿಯ ಆಯವ್ಯಯವಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಪ್ರತಿಕ್ರಿಯಿಸಿದ್ದಾರೆ.
ಈ ಆಯವ್ಯಯದಲ್ಲಿ ಕೃಷಿ, ನೀರಾವರಿ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ಪರಿಶಿಷ್ಟ ಜಾತಿ, ಪಂಗಡ ಸೇರಿದಂತೆ ಎಲ್ಲ ವರ್ಗಗಳಿಗೆ, ಎಲ್ಲ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ರೈತ ಪರ ಹಾಗೂ ಎಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಸಾಮಾಜಿಕ ನ್ಯಾಯ ನೀಡುವ ಆಯ ವ್ಯಯ ಮಂಡಿಸಿದ್ದಾರೆ. ಇದು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾದ ಬಜೆಟ್ ಆಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ