ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ನಿರ್ಣಯಿಸಿ – ಹುಕ್ಕೇರಿ ಶ್ರೀ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಸಚಿವ, ಶಾಸಕರು ಚರ್ಚೆ ನಡೆಸಿ ಈ ಭಾಗದ ಮಸ್ಯೆಗೆ ಮುಕ್ತಿ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳಕೊಳ್ಳಬೇಕೆಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಎಂದರೆ ಗದ್ದಲ, ಗಲಾಟೆಯಾಗುತ್ತದೆ ಎನ್ನುವ ಭಾವನೆ ಬಂದಿದೆ. ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಬೇಕಿದ್ದ ಅಧಿವೇಶನದಲ್ಲಿ ವ್ಯರ್ಥ ಆಲಾಪ ಬೇಡ. ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಲು ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಲಾಗಿದೆ. ಈ ಸೌಧದಲ್ಲಿನ ಚರ್ಚೆಗಳು ಈ ಭಾಗದ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ವೇದಿಕೆಯಾಗಬೇಕು ಎಂದು ಶ್ರೀಗಳು ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧ ಶಕ್ತಿ ಕೇಂದ್ರ. ಇಡೀ ಸರಕಾರವೇ ೧೦ ದಿನಗಳ ಕಾಲ ಬೆಳಗಾವಿಯಲ್ಲಿ ಇರುತ್ತದೆ. ಪಕ್ಷಾತೀತವಾಗಿ ಉತ್ತರ ಕರ್ನಾಟಕದ ಸಚಿವ, ಶಾಸಕರು ಈ ಭಾಗದ ಜ್ವಲಂತ ಸಮಸ್ಯೆಗಳಿಗೆ, ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಅವಶ್ಯಕತೆ ಇದೆ. ಉತ್ತರ ಕರ್ನಾಟಕದ ಜನರಿಗೆ ಅನುಕೂಲವಾಗುವ ಬೆಂಗಳೂರಿನಲ್ಲಿರುವ ಮಹತ್ವದ ಕಚೇರಿಗಳನ್ನು ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಿ ಈ ಭಾಗದ ಜನರಿಗೆ ಅನುಕೂಲವಾಗುವಂತಹ ಮಹತ್ವದ ನಿರ್ಣಯ ಕೈಗೊಳ್ಳುವಂತಾಗಲಿ ಎಂದು ಶ್ರೀಗಳು ಆಶಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ