Latest

ಕದ್ದುಮುಚ್ಚಿ ಕೊಲಂಬೋಗೆ ಹೋಗಿರಲಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊಲಂಬೋಗೆ ಕುಮಾರಸ್ವಾಮಿ ಜತೆ ಹೋಗಿದ್ದೆ ಎಂಬ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಚಾರ ವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ…ಎಂದು ಗುಡುಗಿದ್ದಾರೆ.

ಜಮೀರ್ ಹೇಳಿಕೆಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, 2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಹೇಳಿ ಹೋಗಿದ್ದೆವು. ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ ಎಂದು ಹೇಳಿದ್ದಾರೆ.

Home add -Advt

ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದೇನೆ. ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದಿದ್ದಾರೆ.

ಕುಮಾರಸ್ವಾಮಿ ಜತೆ ಕೊಲಂಬೊಗೆ ಹೋಗಿದ್ದೆ ಎಂದ ಶಾಸಕ

Related Articles

Back to top button