BusinessKannada NewsKarnataka NewsLatest

*BREAKING: ಖ್ಯಾತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್, ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ವರ್ತೂರು ಬಳಿಯ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿಯೇ ಸಿ.ಜೆ.ರಾಯ್ ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಮುಂಜಾನೆ ಕಾನ್ಫಿಡೆಂಟ್ ಗ್ರೂಪ್ ಕಚೇರಿ ಹಾಗೂ ಸಿ.ಜೆ.ರಾಯ್ ಅವರ ಬಂಗಲೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇತ್ತೀಚಿನ ದಿನಗಳಲ್ಲಿ ಸಿ.ಜೆ.ರಾಯ್ ಅವರ ಕಚೇರಿ, ಮನೆ ಮೇಲೆ ಪದೇ ಪದೇ ಐಟಿ ದಾಳಿ ನಡೆದಿತ್ತು.

Home add -Advt

ಇಂದೂ ಕೂಡ ಐಟಿ ದಾಳಿ ನಡೆದಿತ್ತು. ದಾಳಿ ಬೆನ್ನಲ್ಲೇ ಸಿ.ಜೆ.ರಾಯ್ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿ.ಜೆ.ರಾಯ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button