Kannada NewsKarnataka NewsLatestPolitics

*ಕಾಂಗ್ರೆಸ್ ಮತ್ತು ಕಾಕ್ರೋಚ್ ಜನತಾ ಪಾರ್ಟಿ ಒಂದೇ*: *ಪ್ರಿಯಾಂಕ್ ಖರ್ಗೆ ಹೇಳಿಕೆ ವೈರಲ್*

ಪ್ರಗತಿವಾಹಿನಿ ಸುದ್ದಿ: “ಕಾಂಗ್ರೆಸ್ ಮತ್ತು ಕಾಕ್ರೋಚ್ ಜನತಾ ಪಾರ್ಟಿ ಎರಡೂ ಒಂದೇ ಬಿಡಿ” — ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಈ ಹೇಳಿಕೆ ಇದೀಗ ಗಮನ ಸೆಳೆದಿದೆ. ವಿದ್ಯಾರ್ಥಿಗಳ ಜೊತೆಗಿನ ಸಂವಾದದ ವೇಳೆ ಜೆನ್‌ಝೀಗಳ ರಾಜಕೀಯ ಒಲವಿನ ಬಗ್ಗೆ ಪ್ರಶ್ನಿಸಿದ ಸಚಿವರು, ಕಾಂಗ್ರೆಸ್ ಮತ್ತು ಸಿಜೆಪಿ ಬಗ್ಗೆ ವಿದ್ಯಾರ್ಥಿಗಳು ನೀಡಿದ ಪ್ರತಿಕ್ರಿಯೆಗೆ ಹಾಸ್ಯಭರಿತವಾಗಿ ಉತ್ತರಿಸಿದ್ದಾರೆ.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವಾಗ, “ನೀವೆಲ್ಲ ಜೆನ್‌ಝೀಗಳಾ? ಸಿಜೆಪಿಯನ್ನು ಫಾಲೋ ಮಾಡ್ತೀರಾ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ಇದಕ್ಕೆ ವಿದ್ಯಾರ್ಥಿಗಳು ಹೌದು ಎಂದು ಪ್ರತಿಕ್ರಿಯಿಸಿದರು. ಬಳಿಕ, “ನೀವೆಲ್ಲ ಕಾಂಗ್ರೆಸ್ ಪಾರ್ಟಿನಾ ಅಥವಾ ಕಾಕ್ರೋಚ್ ಜನತಾ ಪಾರ್ಟಿನಾ?” ಎಂದು ಕೇಳಿದರು.

ವಿದ್ಯಾರ್ಥಿಗಳು ಎರಡೂ ಪಕ್ಷಗಳ ಹೆಸರುಗಳನ್ನು ಕೂಗಿದಾಗ, ಅರ್ಧದಷ್ಟು ಮಂದಿ ಕಾಂಗ್ರೆಸ್ ಎಂದರೆ, ಇನ್ನರ್ಧದಷ್ಟು ಮಂದಿ ಸಿಜೆಪಿ ಎಂದಿದ್ದಾರೆ ಎಂದು ಸಚಿವರು ಹೇಳಿದರು. ಈ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದ ಟ್ರಾಫಿಕ್ ಪಾರ್ಕ್ ಗುದ್ದಲಿ ಪೂಜೆ ಹಾಗೂ ಟ್ರಾಫಿಕ್ ಪೊಲೀಸರಿಗೆ ಬೈಕ್ ವಿತರಣೆ ಕಾರ್ಯಕ್ರಮದಲ್ಲಿ ನಡೆದಿದೆ.

ವಿದ್ಯಾರ್ಥಿಗಳ ಉತ್ತರಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, “ಎರಡೂ ಒಂದೇ ಬಿಡಿ” ಎಂದು ಹೇಳಿದ್ದಾರೆ. ಸಚಿವರ ಈ ಮಾತು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button