Belagavi NewsBelgaum NewsKannada NewsKarnataka NewsPolitics

*ಬೆಳಗಾವಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಗಾಗಿ ಕಿತ್ತಾಡಿಕೊಂಡ ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಇಂದು ನಡೆದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕೆಲಕಾಲ ವಾಗ್ವಾದ ನಡೆಯಿತು.

ಕಾರ್ಯಕ್ರಮವನ್ನು ಪ್ರೊಟೋಕಾಲ್ ಪ್ರಕಾರ ನಡೆಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಈ ವಿಚಾರವಾಗಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ನಂತರ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಹಿರಿಯರು ಮಧ್ಯಪ್ರವೇಶಿಸಿ ಎರಡೂ ಪಕ್ಷಗಳ ಕಾರ್ಯಕರ್ತರನ್ನು ಸಮಾಧಾನಪಡಿಸಿದರು.ಇದಾದ ಬಳಿಕ ಕಾರ್ಯಕ್ರಮವು ಮುಂದುವರಿಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button