ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜನೆವರಿ 11ರಂದು ಬೆಳಗಾವಿಯಲ್ಲಿ ಆರಂಭವಾಗಲಿರುವ ಕಾಂಗ್ರೆಸ್ ಬಸ್ ಯಾತ್ರೆಯ ಹೆಸರನ್ನು ಫೈನಲ್ ಮಾಡಲಾಗಿದೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಈ ಬಸ್ ಯಾತ್ರೆ ಹಮ್ಮಿಕೊಂಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಪಕ್ಷದ ಎಲ್ಲ ನಾಯಕರೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಾತ್ರೆಯು ಇಡೀ ರಾಜ್ಯವನ್ನು ಸುತ್ತಲಿದೆ.
2023ರ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಈ ಯಾತ್ರೆ ಆಯೋಜಿಸಲಾಗಿದೆ. ಬಿಜೆಪಿ ಸರಕಾರವನ್ನು ಓಡಿಸಿ ಕಾಂಗ್ರೆಸ್ ಸರಕಾರ ತರುವಂತೆ ಜನರಬಳಿಗೆ ಕಾಂಗ್ರೆಸ್ ತೆರಳುತ್ತಿದೆ. ಹಾಗಾಗಿ ಈ ಯಾತ್ರೆಗೆ ಪ್ರಜಾಧ್ವನಿ ಎಂದು ಹೆಸರಿಡಲಾಗಿದೆ.
ಯಾತ್ರೆಯನ್ನು ಬೆಳಗಾವಿಯಲ್ಲಿ ಆರಂಭಿಸಲು ಸುವರ್ಣವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಜನವರಿ 11ರಿಂದ ಕಾಂಗ್ರೆಸ್ ಬಸ್ ಯಾತ್ರೆ
https://pragati.taskdun.com/congress-bus-tour-starts-from-janevary-11/
*ಬೆಳಗಾವಿಯಿಂದ ಕಾಂಗ್ರೆಸ್ ಬಸ್ ಯಾತ್ರೆ ಆರಂಭ*
https://pragati.taskdun.com/belagavicongress-bus-yatrakrishnamahadaicongress-meetingd-k-shivakumarsiddaramaiah/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ