Cancer Hospital 2
Bottom Add. 3

ಚುನಾವಣಾ ಕಣದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನ

ಪ್ರಗತಿವಾಹಿನಿ ಸುದ್ದಿ, ಜೈಪುರ: ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗುರ್ಮೀತ್‌ ಸಿಂಗ್‌ ಕೂನರ್‌ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ.

ಅವರಿಗೆ 75 ವರ್ಷ ವಯಸ್ಸಾಗಿತ್ತು. ಕರಣಪುರದ ಹಾಲಿ ಶಾಸಕರಾಗಿದ್ದ ಕೂನರ್ ಅವರನ್ನು ನವೆಂಬರ್ 12 ರಂದು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ಜೆರಿಯಾಟ್ರಿಕ್ ಮೆಡಿಸಿನ್ ವಾರ್ಡ್‌ಗೆ ದಾಖಲಿಸಲಾಗಿತ್ತು.

ಕೂನರ್ ಅವರು ಸೆಪ್ಟಿಕ್ ಆಘಾತ ಮತ್ತು ಮೂತ್ರಪಿಂಡದ ಕಾಯಿಲೆಯಿಂದ ಸೆಪ್ಸಿಸ್‌ನಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ನೀಡಿದ ಮರಣ ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ. ಅವರು ಅಧಿಕ ರಕ್ತದೊತ್ತಡದಿಂದಲೂ ಬಳಲುತ್ತಿದ್ದರು.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ. ಈ ವೇಳೆ ಕೂನರ್ ಸಾವು ಪಕ್ಷಕ್ಕೆ ಆಘಾತ ತಂದೊಡ್ಡಿದೆ.

Bottom Add3
Bottom Ad 2

You cannot copy content of this page