Kannada NewsKarnataka NewsLatest

ಜಿಲ್ಲಾ ಚುನಾವಣಾಧಿಕಾರಿಗೆ ಕಾಂಗ್ರೆಸ್ ಲಿಖಿತ ದೂರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಚುನಾವಣೆ ಅಕ್ರಮ ನಡೆಸಲು ಹುನ್ನಾರ ನಡೆದಿದ್ದು ಈ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಜಿಲ್ಲಾ ಚುನಾವಣಾಧಿಕಾರಿಗೆ ಲಿಖಿತ ದೂರನ್ನು ಸಲ್ಲಿಸಿದೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಅಭ್ಯರ್ಥಿ ಹಾಗೂ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ, ಅವರ ಸಹೋದರರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣೆ ಅಕ್ರಮ ನಡೆಸಲು ಹುನ್ನಾರ ಮಾಡಿರುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಚುನಾವಣಾಧಿಕಾರಿಯೂ ಆಗಿರುವ ಬೆಳಗಾವಿ ಜಿಲ್ಲಾಧಿಕಾರಿ ವೆಂಕಟೇಶ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬರೆದಿರುವ ಪತ್ರವನ್ನು ಶಾಸಕರಾದ ಎನ್.ಎ. ಹ್ಯಾರೀಸ್, ಮಾಜಿ ಎಂಎಲ್ಸಿ ಐವಾನ್ ಡಿಸೋಜಾ, ಬೆಳಗಾವಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ರಾಜು ಸೇಠ, ವಿನಯ್ ನಾವಲಗಟ್ಟಿ ಅವರನ್ನು ಒಳಗೊಂಡ ಕಾಂಗ್ರೆಸ್ ನಿಯೋಗ ಸೋಮವಾರ ಹಸ್ತಾಂತರಿಸಿತು.

ನಾನಾಗಿದ್ರೆ ಒಂದು ಗಂಟೆಯೂ ಉಳಿಸಿಕೊಳ್ತಿರಲಿಲ್ಲ – ಡಿ.ಕೆ.ಶಿವಕುಮಾರ ಕಿಡಿ ಕಿಡಿ

ಇಂತವರೆಲ್ಲ ಒಳಗಡೆ ಇದ್ದಿದ್ರೆ ದೊಡ್ಡ ಅನಾಹುತ ಆಗ್ತಿತ್ತು – ರಮೇಶ ಜಾರಕಿಹೊಳಿ ಕುರಿತು ಡಿ.ಕೆ.ಶಿವಕುಮಾರ ಆಕ್ರೋಶ

Home add -Advt

Related Articles

Back to top button