Cancer Hospital 2
Beereshwara 36
LaxmiTai 5

ಕಾಂಗ್ರೆಸ್ ಸರ್ಕಾರ ತಾನು ರೈತ ವಿರೋಧಿ ಎಂಬುದನ್ನು ಸಾಬಿತು ಮಾಡುತ್ತಿದೆ – ಕಡಾಡಿ

Anvekar 3

Emergency Service

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತಪರ ಯೋಜನೆಗಳನ್ನೆಲ್ಲಾ ಕೈ ಬಿಡುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತಾನು ರೈತ ವಿರೋಧಿ ಎಂಬುದನ್ನು ಸಾಬಿತು ಮಾಡುತ್ತಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಆರೋಪಿಸಿದ್ದಾರೆ.
ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಎಪಿಎಂಸಿ ಕಾನೂನು ರದ್ದು
ರೈತರು ತಾವು ಬೆಳೆದಂತ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯದಿಂದ ವಂಚಿತರಾಗಿದ್ದಾರೆ. ಹಿಂದೆ ಸಾಗಾಣಿಕೆ ವೆಚ್ಚ, ದಲ್ಲಾಳಿಗಳ ಕಮೀಶನ್ ಇತರೆ ಖರ್ಚುಗಳ ಉಳಿತಾಯವಾಗುತ್ತಿತ್ತು. ಈ ಅನುಕೂಲಗಳನ್ನು ರದ್ದುಪಡಿಸಿ, ಕೇವಲ ಎಪಿಎಂಸಿಗಳಲ್ಲಿ ಮಾತ್ರ ಮಾರಾಟ ಮಾಡುವ ಹಳೆಯ ಕಾನೂನು ಜಾರಿಗೆ ತರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದಾರೆ.
ವಿದ್ಯುತ್ ದರ ಏರಿಕೆ
ಏಕಾಏಕಿ ವಿದ್ಯುತ್ ದರ ಏರಿಕೆಯಿಂದ ಬಟ್ಟೆ ಕೈಗಾರಿಕೆಗಳು, ರೈಸ್ ಮಿಲ್, ಬೆಲ್ಲ-ಸಕ್ಕರೆ ಉತ್ಪಾದನಾ ಕೈಗಾರಿಕೆಗಳು ಸೇರಿದಂತೆ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆ (ಎಂಎಸ್ ಎಂಇ) ಇವುಗಳಿಗೆ ಬಾರಿ ಹೊಡೆತ ಉಂಟಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರಲ್ಲದೇ ಗೃಹ ಬಳಕೆಯ ವಿದ್ಯುತ ದರವು ಪ್ರತಿ ಯುನಿಟ್‌ಗೆ ಸರಾಸರಿ ೭೦ ಪೈಸೆ ದರ ಹೆಚ್ಚಳ ಹಾಗೂ ಕನಿ? ದರವನ್ನು ೬೦ ರೂ ನಿಂದ ೭೦ ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ರೀತಿ ಬೇಕಾಬಿಟ್ಟಿ ದರ ಏರಿಕೆ ಮಾಡುವ ಮೂಲಕ ಗೃಹ ಬಳಕೆದಾರರಿಗೆ, ಸಣ್ಣ ಉದ್ಯಮದಾರರಿಗೆ ಪೆಟ್ಟು ನೀಡಿರುವುದು ಯಾವ ನ್ಯಾಯ ಎಂದು ಅವರು ಟೀಕಿಸಿದ್ದಾರೆ.
ರೈತ ವಿದ್ಯಾನಿಧಿ ಯೋಜನೆ ರದ್ದು
೧೧ ಲಕ್ಷ ರೈತ ಕುಟುಂಬದ ವಿದ್ಯಾರ್ಥಿಗಳಿಗೆ ಪ್ರತಿ ವ? ರೂ ೪೩೮.೬೯ ಕೋಟಿ ರೂಪಾಯಿಗಳ ರೈತ ವಿದ್ಯಾನಿಧಿ ಯೋಜನೆಯನ್ನು ರದ್ದು ಪಡಿಸುವ ಮೂಲಕ ಬಡ ರೈತನ ಮಕ್ಕಳಿಗೆ ಅನ್ಯಾಯವೆಸಗುತ್ತಿರುವುದು ಎಷ್ಟು ಸರಿ ಎಂದಿರುವ ಅವರು, ಜಿಲ್ಲೆಗೊಂದು ಗೋಶಾಲೆ ಯೋಜನೆ ರದ್ದು ಮಾಡಿದ್ದು ಸರಿಯಲ್ಲ ಎಂದಿದ್ದಾರೆ. ಗೋಹತ್ಯೆ ತಡೆ ಹಾಗೂ ಜಾನುವಾರು ಸಂರಕ್ಷಿಸಲು ಪ್ರತಿ ಜಿಲ್ಲೆಗೊಂದು ಗೋಶಾಲೆಯನ್ನು ಸ್ಥಾಪಿಸಲು ಬಿಜೆಪಿ ಸರ್ಕಾರ ತಿರ್ಮಾನಿಸಿತ್ತು. ಅಂತಹ ಪೂಜನೀಯ ಗೋಮಾತೆಯನ್ನು ಅಕ್ರಮ ಗೋ ಸಾಗಾಣೆಕಾರರಿಗೆ ಲಾಭ ಮಾಡಿಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಹಿಂಪಡೆಯಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಭೂ ಸಿರಿ ಯೋಜನೆ ರದ್ದು
ರಾಜ್ಯದ ಸುಮಾರು ೫೦ ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ ರೈತರಿಗೆ ಭೂ ಸಿರಿ ಎಂಬ ಯೋಜನೆಯಲ್ಲಿ ೧೦,೦೦೦ ರೂ. ಹೆಚ್ಚುವರಿ ಸಹಾಯಧನ ನೀಡುವ ಹಿಂದಿನ ಸರ್ಕಾರದ ನಿರ್ಣಯವನ್ನು ರದ್ದು ಪಡಿಸಲಾಗುತ್ತಿದೆ. ಇದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಕಿಸಾನ್ ಸಮ್ಮಾನ್ ನಿಧಿ ಯೋಜನೆ ರದ್ದು
ಕೇಂದ್ರ ಸರ್ಕಾರದ ಜೊತೆ ರಾಜ್ಯ ಸರ್ಕಾರ ಕೂಡ ಸುಮಾರು ೫೧ ಲಕ್ಷ ರೈತರಿಗೆ (ವಾರ್ಷಿಕ ಎರಡು ಕಂತುಗಳಲ್ಲಿ ೪೦೦೦ ರೂ.) ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೆ ತಂದಿದ್ದನ್ನು ತಡೆ ಹಿಡಿಯಲು ಯೋಚಿಸುತ್ತಿದೆ. ಇದು ಸರಿಯಾದ ನಿರ್ಧಾರವಲ್ಲ ಎಂದು ಕಿವಿಮಾತು ಹೇಳಿದ್ದಾರೆ. ರಾಜ್ಯದ ರೈತರಿಗೆ ಪ್ರತಿ ಎಕರೆಗೆ ೨೫೦ ರೂ. ನಂತೆ, ೫ ಎಕರೆಗೆ ೧೨೫೦ ರೂ.ಗಳ ಡೀಸೆಲ್ ಸಹಾಯಧನ ನೀಡುವ ರೈತ ಶಕ್ತಿ ಯೋಜನೆ ರದ್ದು ಯೋಜನೆಯನ್ನು ಪ್ರಸ್ತುತ ಸರ್ಕಾರ ರದ್ದುಪಡಿಸುತ್ತಿದೆ.
ನೀರಾವರಿ ಯೋಜನೆಗಳ ನಿರ್ಲಕ್ಷ
ಬಿಜೆಪಿ ರಾಜ್ಯ ಸರ್ಕಾರದಲ್ಲಿ ನೀರಾವರಿ ಯೋಜನೆಗಳಿಗೆ ೨೩ ಸಾವಿರ ಕೋಟಿ ಅನುದಾನ ಒದಗಿಸಿದ್ದು ಅದನ್ನು ಈಗ ೧೯ ಸಾವಿರ ಕೋಟಿ ರೂ.ಗೆ ಇಳಿಸಿ, ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಮಾಡಿದ ಪಾದಯಾತ್ರೆ ಕೇವಲ ರಾಜಕೀಯ ಸ್ಟಂಟ್ ಎಂಬುದನ್ನು ನಿರೂಪಿಸಿದೆ ಎಂದು ಆರೋಪಿಸಿದ್ದಾರೆ.
ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದು
ಈ ಹಿಂದೆ ಕೃಷಿ ಭೂಮಿ ಕೊಳ್ಳುವವರು ಕೃಷಿಕನಾಗಿರಬೇಕು ಅಥವಾ ಕೃಷಿ ಕೂಲಿಕಾರನಾಗಿರಬೇಕು ಎಂಬ ನಿಯಮವಿತ್ತು. ಹೀಗಾಗಿ ರೈತರ ಜಮೀನುಗಳಿಗೆ ಯೋಗ್ಯದರ ಸಿಗುತ್ತಿರಲಿಲ್ಲ. ಇದನ್ನು ಬಿಜೆಪಿ ಸರ್ಕಾರ ಇದ್ದಾಗ ಕೃಷಿ ಭೂಮಿ ಮಾರಾಟ ಕಾಯ್ದೆ ಎಂಬ ಕಾನೂನನ್ನು ತರಲಾಯಿತು ಈ ಕಾಯ್ದೆಯಲ್ಲಿ ಯಾರು ಬೇಕಾದರೂ ಕೃಷಿ ಜಮೀನನ್ನು ಕೊಂಡುಕೊಳ್ಳಬಹುದು ಎಂಬ ನಿಯಮವನ್ನು ಜಾರಿ ಮಾಡಲಾಯಿತು. ಇದರಿಂದ ಕೃಷಿ ಜಮೀನುಗಳ ಮೌಲ್ಯ ಹೆಚ್ಚಾಗಿತ್ತು ಮತ್ತು ಇದರಿಂದ ಕೃಷಿ ಪದವೀಧರ ವಿದ್ಯಾರ್ಥಿಗಳು ಕೂಡ ಜಮೀನನ್ನು ಖರೀದಿಸುವ ಮೂಲಕ ಹೊಸ ಕೃಷಿ ಪದ್ಧತಿಯನ್ನು ಅಳವಡಿಸಿ ಕೃಷಿಯನ್ನು ಮಾಡಲಾಯಿತು. ಇಂದು ಸಿದ್ದರಾಮಯ್ಯ ಸರ್ಕಾರ ಈ ಕೃಷಿ ಭೂಮಿ ಮಾರಾಟ ಕಾಯ್ದೆಯನ್ನು ರದ್ದುಗೊಳಿಸಿದೆ. ಇದು ಕೃಷಿ ಭೂಮಿಯ ದರ ಕುಸಿದು ಕೃಷಿಕರಿಗೆ ಹೊಡೆತ ನೀಡಲಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

Bottom Add3
Bottom Ad 2