
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವುದೇ ಹಣವನ್ನು ಸರ್ಕಾರ ಹಂಚಿಕೆ ಮಾಡಿಲ್ಲ. ಆದರೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ ನೀಡುವ ಮೂಲಕ ಅನ್ಯಾಯ ಎಸಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕುಟುಕಿದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ಸಹ ಈ ಮೀಸಲಾತಿ ನೀತಿಯನ್ನು ವಿರೋಧಿಸುತ್ತದೆ. ಅಲ್ಲದೇ ಸರ್ಕಾರದ ಈ ನಿರ್ಧಾರದಿಂದ ಸಾರ್ವಜನಿಕವಲಯದಲ್ಲೂ ಪ್ರತಿರೋಧ ವ್ಯಕ್ತವಾಗುತ್ತಿದೆ ಎಂದರು.
ಮೀಸಲಾತಿ ಕಲ್ಪಿಸಿರುವುದು ಸಿಎಂ ಸಿದ್ದರಾಮಯ್ಯ ಸರ್ಕಾರದ ನಿಲುವು ಸಂವಿಧಾನ ಬಾಹಿರವಾಗಿದೆ. ಬಿಜೆಪಿ ಈ ಕ್ರಮವನ್ನು ಖಂಡಿಸುತ್ತದೆ. ನಾವು ಸರ್ಕಾರದ ನಿರ್ಧಾರದ ವಿರುದ್ಧ ಸದನದ ಒಳಗೆ ಮತ್ತು ಹೊರಗೂ ಹೋರಾಡುತ್ತೇವೆ ಎಂದು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.